ಈ ಜಿಲ್ಲೆಯಲ್ಲಿ ಶೇ. 72 ರಷ್ಟು ಮಳೆ : ಬೆಳೆ ಪರಿಹಾರ ಬಿಡುಗಡೆ: ಮಾಹಿತಿ ಕೊಟ್ಟ ಪ್ರಿಯಾಂಕ್‌ ಖರ್ಗೆ

ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ.69 ರಷ್ಟು ಹಾಗೂ ಸೆಪ್ಟೆಂಬರ್ ತಿಂಗಳ ಮೊದಲ 28 ದಿನಗಳಲ್ಲಿ ಶೇ.72ರಷ್ಟು ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದ ಆಗಿರುವ ಪರಿಣಾಮಗಳು ಹಾಗೂ ಅವುಗಳನ್ನು ಸಮರ್ಪಕವಾಗಿ ಎದುರಿಸುವ ಸಂಬಂಧ ಕಲುಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಲವು ಸೂಚನೆಗಳು ನೀಡಿದ್ದೇನೆ ಎಂದರು.2025ರ ಮುಂಗಾರು ಹಂಗಾಮಿನಲ್ಲಿ 3.01 ಲಕ್ಷ ರೈತ ಬಾಂಧವರು ನೊಂದಣಿ ಮಾಡಿಸಿದ್ದು ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ಕಾರಣಕ್ಕೆ ಇಲ್ಲಿಯವರೆಗೆ 1.78 ಲಕ್ಷ ರೈತ ಬಾಂದವರು ಸ್ಥಳೀಯ ವಿಪತ್ತು ಅಡಿಯಲ್ಲಿ ಶೇ.59ರಷ್ಟು ರೈತ ಬಾಂಧವರು ದೂರು ಸಲ್ಲಿಸಿರುವ ಪ್ರಯುಕ್ತ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಹಾನಿ ಸಮಿಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೆ ದಿವಸಗಳಲ್ಲಿ ಬೆಳೆ ಹಾನಿಯಾದ ರೈತ ಬಾಂಧವರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ನದಿ, ಹಳ್ಳ, ಕೆರೆ ದಡದಲ್ಲಿರುವ ಗುಡಿ, ಮಸಿದಿ,ಚರ್ಚ್ ಮುಂತಾದ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಪ್ರಾರ್ಥನೆ ಹಾಗೂ ಭಾಗಿನ ಸಲ್ಲಿಸುವವರನ್ನು ಮನವೊಲಿಸಿ ನದಿ, ಹಳ್ಳ, ಕೆರೆ ದಡದಲ್ಲಿ ತೆರಳದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳುವುದು.

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳ ಗೋಡೆಗಳು ಕುಸಿಯುವ ಸಾಧ್ಯತೆ ಇರುವದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ.ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚರಿಕೆಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಕ್ರಮವಹಿಸುವುದು.ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ, ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೊ,ಸೆಲ್ಸಿಗಳನ್ನು ತೆಗೆಯದಂತೆ ಸೂಚಿಸುವುದು.

ಮೀನುಗಾರರು ಮೀನು ಹಿಡಿಯಲು ನದಿಯಲ್ಲಿ ಹೋಗದಂತೆ ಮುನ್ನಚರಿಕೆ ಕ್ರಮಗೊಳ್ಳುವುದು. ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ, ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು.ಜಲಾಶಯದಿಂದ ನೀರು ಬಿಡುವ ಬಗ್ಗೆ ಮಾಹಿತಿ ಬಂದ ಕೂಡಲೇ ನದಿ ಪಾತ್ರದಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ಮುಂಚಿತವಾಗಿ ತಿಳುವಳಿಕೆ ನೀಡಲು ಡಂಗುರದ ಮೂಲಕ ಪ್ರಚಾರ ಮಾಡಲು ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು. ಅತಿವೃಷ್ಠಿಯಿಂದ ನೀರು ತುಂಬಿ ಸಂಚಾರಕ್ಕೆ ಅಡ್ಡಿಯಾಗಿರುವ ಸೇತುವೆಗಳಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸುವುದು ಮತ್ತು ಜನರು ಅಂತಹ ಸೇತುವೆಗಳ ಮೇಲೆ ಸಂಚರಿಸದಂತೆ ನಿಗಾ ವಹಿಸುವುದು.ಪ್ರವಾಹಕ್ಕೆ ಸಿಲುಕಿ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಮುಂಜಾಗರೂಕತೆಯಾಗಿ ಡಂಗೂರ ಸಾರುವುದು, ಮೈಕ್ ಮೂಲಕ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮವಹಿಸುವುದು. ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಹಾಗೂ ತುರ್ತು ಪರಿಹಾರ ನೀಡಲು ನಿಯಮಾನುಸಾರ ಕ್ರಮ ವಹಿಸಬೇಕು. ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 1.84 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು ತಲುಪುತ್ತದೆ.

sreelakshmisai
Author

sreelakshmisai

Leave a Reply

Your email address will not be published. Required fields are marked *