ಬಂಗಾಳ ಕೊಳ್ಳಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇವತ್ತು, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿನ ತೀರದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ.
ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಈಗಾಗಲೇ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗ್ತಿದೆ. ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ಚೆನ್ನೈ, ಪುದುಚೇರಿ ಹಾಗೂ ಆಂಧ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಸೇಲಂ ಜಿಲ್ಲೆಯ ಹಲವೆಡೆ ಎಡಬಿಡದೇ ಮಳೆಯಾಗಿದ್ದು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿದೆ. ಮತ್ತೊಂದೆಡೆ ಧರ್ಮಪುರಿ ಜಿಲ್ಲೆಯಲ್ಲೂ ಭಾರಿ ಮಳೆಯಾಗ್ತಿದ್ದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಸೂಚಿಸಿದೆ.ಇತ್ತ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು ಮತ್ತು ನಾಳೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಪಕ್ಕದ ಪುದುಚೇರಿಯ ಪೆರಿಯಕಲಪೇಟೆಯಲ್ಲಿ 25 ಸೆಂ.ಮೀ ಮಳೆಯಾಗಿದೆ ಜನರು ತತ್ತರಿಸಿ ಹೋಗಿದ್ದಾರೆ. ಪುದುಚೇರಿ, ವಿಲ್ಲುಪುರಂ ಹಾಗೂ ಕಡಲೂರು ಸೇರಿದಂತೆ 23 ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಆಂಧ್ರಪ್ರದೇಶದ ನೆಲ್ಲೂರು, ರಾಯಲಸೀಮಾ, ವಿಜಯವಾಡ, ಕಡಪ ಜಿಲ್ಲೆಗಳಲ್ಲೂ ಮಳೆಯಾಗ್ತಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪಕ್ಕದ ರಾಜ್ಯ ತೆಲಂಗಾಣದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜನರು ಎಚ್ಚರ ವಹಿಸುವಂತೆ ಮಾಹಿತಿ ನೀಡಲಾಗಿದೆ.









