Gruhalakshmi amount : ದಸರಾ ಹಬ್ಬಕ್ಕೆ ಗೃಹಲಕ್ಷ್ಮಿ ಹಣ ಜಮಾ, ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್‌ ನೀಡಿದ್ದಾರೆ. ದಸರಾ ಹಬ್ಬಕ್ಕೆಂದು ಈಗಾಗಲೇ 23 ನೇ (ಜುಲೈ ತಿಂಗಳ) ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವೆ, ರಾಜ್ಯದ 1.24 ಕೋಟಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 22 ಕಂತುಗಳ ಹಣ ತಲಿಪಿದೆ.

ದಸರಾ ಹಬ್ಬದ ಸಂಭ್ರಮಕ್ಕೆ ಅನುಕೂಲವಾಗಲಿ ಎಂದು ಮೂರು ದಿನದ ಹಿಂದೆ 23ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಇನ್ನು 24 ನೇ ಕಂತಿನ ಅಂದರೆ, ಆಗಸ್ಟ್‌ ತಿಂಗಳ ಹಣ ಬಾಕಿ ಇದ್ದು, ಅದನ್ನು ಶೀಘ್ರ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. (ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ಗೃಹಲಕ್ಷ್ಮಿ ಯೋಜನೆ ಫಲಾನುಭವಿ)

ಖಾತೆಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆಮೂರು ದಿನಗಳ ಹಿಂದೆ ಸರ್ಕಾರ ಆರ್ಥಿಕ ಇಲಾಖೆಯಿಂದ ಜಿಲ್ಲಾ ಖಜಾನೆಗಳಿಗೆ ಹಣ ವರ್ಗಾವಣೆಯಾಗಿದೆ. ಜಿಲ್ಲಾವಾರು ಫಲಾನುಭವಿಗಳ ಒಂದು ಎರಡು ದಿನಗಳ ಅಂತರದಲ್ಲಿ ಖಾತೆಗೆ ಹಣ ಜಮೆಯಾಗಲಿದೆ. ಈ ವಾರಾಂತ್ಯದೊಳಗೆ ಎಲ್ಲಾ ಫಲಾನುಭವಿಳಿಗೂ ಹಣ ಸಿಗಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.

ಈವರೆಗೂ ಫಲಾನುಭವಿಗಳಿಗೆ ಸಿಕ್ಕ ಹಣ ಎಷ್ಟು?ಒಟ್ಟು 23 ಕಂತುಗಳ ಹಣ ಖಾತೆಗೆ ಜಮೆ ಆಗಿವೆ ಎಂದು ಸಚಿವ ಮಾಹಿತಿ ನೀಡಿದ್ದಾರೆ. ಅದರಂತೆ, ಯೋಜನೆ ಆರಂಭವಾದ ಇಲ್ಲಿಯವರೆಗೂ ಪ್ರತಿ ತಿಂಗಳು 2 ಸಾವಿರದಂತೆ ಪ್ರತಿಯೊಬ್ಬ ಫಲಾನುಭವಿಗೂ 46 ಸಾವಿರ ರೂ. ಜಮೆ ಆಗಿದೆ.ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಸಹಕಾರ ಸಂಘ ಸ್ಥಾಪನೆಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರ ಪರಿಣಾಮ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ.

ಈ‌ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಹೇಳಿದರು.

ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು.ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ.

ನವ ದೇವಿಯ ಆರಾಧನೆ ಮಾಡಿ. ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯ ದಶಮಿ. ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ದಸರಾ ಆಚರಿಸುತ್ತಾ ಬರುತ್ತಿದೆ ಎಂದರು.‌

ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಐಸಿಡಿಎಸ್ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರ ಆರಂಭವಾಗಿ ಐವತ್ತು ವರ್ಷ ಆಗಿದ್ದು, ಇದೀಗ ಸುವರ್ಣ ಮಹೋತ್ಸವ ಕಾರ್ಯಕ್ರಮ ಮಾಡಲು ಚಿಂತನೆ ನಡೆದಿದೆ. ಎಲ್ ಕೆಜಿ, ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿಯನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು.

sreelakshmisai
Author

sreelakshmisai

Leave a Reply

Your email address will not be published. Required fields are marked *