ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು – ಕರ್ನಾಟಕದ ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ, ಆಗುಂಬೆ, ಶಿೃಂಗೇರಿ ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 29ರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 1ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಮೋಡದ ವಾತಾವರಣ ಇರಬಹುದು. ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಮೇ 1ರಿಂದ ದಕ್ಷಿಣ ಒಳನಾಡು ಹಾಗೂ ಮೇ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.