Rain Alert :ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನ ಭಾರೀ ಮಳೆ, ಯಾವೆಲ್ಲಾ ಜಿಲ್ಲೆಗಳಿಗೆ ರೆಡ್‌, ಯೆಲ್ಲೋ ಅಲರ್ಟ್‌ ಘೋಷಣೆ?

ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆ (Heavy Rain)ಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನಜೀವನವೇ ಅಸ್ತವ್ಯಸ್ತವಾಗಿದೆ. ಮರಗಳು ಉರುಳಿ ಮನೆ, ವಾಹನಗಳು ಹಾನಿಗೊಳಗಾಗಿವೆ, ಮನೆಯೊಳಗೆ ನೀರು ನುಗ್ಗಿ ಅಪಾರ ವಸ್ತುಗಳಿಗೆ ಹಾನಿಯುಂಟಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಐಎಂಡಿ (IMD) ಎಚ್ಚರಿಕೆ ನೀಡಿದೆ. ವಿವಿಧ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಯಾವೆಲ್ಲಾ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ?ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ (Red alert) ಘೋಷಣೆ ಮಾಡಲಾಗಿದೆ. ಮೇ 24ರ ನಾಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ,ಯಾವೆಲ್ಲಾ ಜಿಲ್ಲೆಗೆ ಆರೆಂಜ್, ಯೆಲ್ಲೋ ಅಲರ್ಟ್ ಎಚ್ಚರಿಕೆ?

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದ‌ರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow alert) ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು (Orange alert) ಘೋಷಿಸಲಾಗಿದೆ.ದಕ್ಷಿಣಕನ್ನಡ, ಉತ್ತರಕನ್ನಡದಲ್ಲಿ ಮಳೆಯಿಂದ ಅಪಾರ ಹಾನಿಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ನಿನ್ನೆ ಸಹ ಭಾರೀ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯನ್ನುಂಟಾಗಿದೆ. ಉತ್ತರ ಕನ್ನಡದಲ್ಲಿ ನಿರಂತರ ಮಳೆ ಮತ್ತು ಬಿರುಗಾಳಿಯಿಂದ ಭಾರಿ ಹಾನಿ ಉಂಟಾಗಿದೆ. ಕರಾವಳಿ ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಭೂಕುಸಿತ ಮತ್ತು ಮರಗಳು ಉರುಳಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಯಿತು.

ತುಂಬಿ ಹರಿಯುತ್ತಿರುವ ಗಂಗಾವಳಿ, ಗುಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಡಿತNH-66 ಮತ್ತು NH-766E ಅನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ ಕಾರಣ ಕುಮಟಾ ತಾಲ್ಲೂಕಿನಲ್ಲಿ ವಾಹನ ಸಂಚಾರಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ. ದೇವಿಮನೆ ಘಟ್ಟದ ಬಳಿ ಸಿರ್ಸಿ-ಕುಮಟಾ ಹೆದ್ದಾರಿಗೆ ಬೃಹತ್ ಬಂಡೆಗಳು ಉರುಳಿವೆ. ಇನ್ನೂ ಹಲವಾರು ಸ್ಥಳಗಳಲ್ಲಿ ನಿರ್ಮಾಣ ಹಂತದಲ್ಲಿರುವ ಈ ಹೆದ್ದಾರಿಯನ್ನು ಜೂನ್ 30ರ ವರೆಗೆ ಸಂಚಾರಕ್ಕೆ ಮುಚ್ಚಲಾಗಿದೆ.ಯಲ್ಲಾಪುರ ಬಳಿಯ ಪಣಸಗುಲಿ ಸೇತುವೆಯ ಮೇಲೆ ಗಂಗಾವಳಿ ತುಂಬಿ ಹರಿಯುತ್ತಿದೆ. ದಿಢೀರ್ ಪ್ರವಾಹದಿಂದಾಗಿ ಗುಲ್ಲಾಪುರ ಗ್ರಾಮಕ್ಕೆ ಮಣ್ಣಿನ ಸೇತುವೆ ಕೊಚ್ಚಿಹೋದ ನಂತರ ಸಂಪರ್ಕ ಕಡಿತಗೊಂಡಿದೆ. ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಕಳೆದ 24 ಗಂಟೆಗಳಲ್ಲಿ 224 ಮಿ.ಮೀ. ಮಳೆಯಾಗಿದ್ದರೆ, ಹೊನ್ನಾವರ ತಾಲೂಕಿನ ಸಾಸ್ಕೋಡ್‌ನಲ್ಲಿ 220 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

sreelakshmisai
Author

sreelakshmisai

Leave a Reply

Your email address will not be published. Required fields are marked *