RAIN ALERT: ವಾಯುಭಾರ ಕುಸಿತ: ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

12.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 14ರ ತನಕವೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು 15ರಿಂದ 20ರ ತನಕ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 16ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 17ರಿಂದ 19ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಗದಗ, ದಾವಣಗೆರೆ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ರಾಯಚೂರು, ಯಾದಗಿರಿ ಜಿಲ್ಲೆಗಳ ಅಂದ್ರಾ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಆಗಸ್ಟ್ 12ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಆಗಸ್ಟ್ 19ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 17ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ 16ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸುವ ಸಾಧ್ಯತೆಗಳಿವೆ.

sreelakshmisai
Author

sreelakshmisai

Leave a Reply

Your email address will not be published. Required fields are marked *