ವಾಯವ್ಯ ಭಾರತವನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ವಾಯವ್ಯ ಭಾರತದಲ್ಲಿ ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಹೇಳಿದೆ.
ಅಕ್ಟೋಬರ್‌ನಲ್ಲೇ ಅತಿ ಹೆಚ್ಚು ಮಳೆಯಾಗಲಿದ್ದು, ಈ ತಿಂಗಳಿನಲ್ಲಿ ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಶೇ.15ರಷ್ಟು ಹೆಚ್ಚಿರಲಿದೆ ಎಂದು ಐಎಂಡಿ ಮುಖ್ಯಸ್ಥ ಮೃತ್ಯುಂಜಯ ಮಹೋಪಾತ್ರ ಅವರು ಹೇಳಿದ್ದಾರೆ.ಈ ಬಾರಿ ಮುಂಗಾರಿನಲ್ಲೂ ಹೆಚ್ಚು ಮಳೆಯಾಗಿದ್ದು, ಸಾಮಾನ್ಯವಾಗಿ ಬರುತ್ತಿದ್ದ 868.6 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದ್ದುಮ 937.2 ಮಿ.ಮೀ. ಮಳೆಯಾಗಿದೆ. ಈಶಾನ್ಯ ಭಾರತದಲ್ಲಿ ಮಳೆಕೊರತೆ ಉಂಟಾಗಿದ್ದು, 1089 ಮಿ.ಮೀ. ಮಳೆಯಾಗಿದೆ ಎಂದು ಅವರು ಹೇಳಿದ್ದಾರೆ.